ಶೇಂಗಾ ಬೆಳೆಯ ಆಧುನಿಕ ತಾಂತ್ರಿಕತೆ ಅಳವಡಿಸಿಕೊಂಡರೆ ಹೆಚ್ಚಿನ ಇಳುವರಿ, ಲಾಭ ಪಡೆಯಲು ಸಾಧ್ಯ: ರವೀಂದ್ರ ಬೈಟಿಪುಲಿ
ಯಾದಗಿರಿ: ಶೇಂಗಾ ಬೆಳೆಯ ಆಧುನಿಕ ತಾಂತ್ರಿಕತೆಗಳು ಆಳವಡಿಸಿಕೊಂಡು ಹೆಚ್ಚಿನ ಇಳುವರಿ ಮತ್ತು ಲಾಭ ಮಾಡಿಕೊಳ್ಳಬೇಕು ಎಂದು ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ರವೀಂದ್ರ ಬೈಟಿಪುಲಿ ತಿಳಿಸಿದರು.
ಕಲಿಕೆ ಟಾಟಾ ಟ್ರಸ್ಟ್ಸ್, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ಯಾದಗಿರಿ ಇವರ ಸಹಯೋಗದಲ್ಲಿ ತಾಲ್ಲೂಕಿನ ಕ್ಯಾಸಪನಳ್ಳಿ ಗ್ರಾಮದ ರಾಜು ತಂದೆ ಹಣಮಂತ ಇವರ ಕ್ಷೇತ್ರ (ಹೊಲ)ದಲ್ಲಿ ಆಯೋಜಿಸಿದ್ದ ಶೇಂಗಾ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಶೇಂಗಾ ಬೆಳೆಯ ಸುಧಾರಿತ ಬೇಸಾಯ ಕ್ರಮಗಳಾದ ಬೀಜ ತಳಿಗಳ ಆಯ್ಕೆ, ಬೀಜೋಪಚಾರ, ಬೀಜದ ಪ್ರಮಾಣ, ಬಿತ್ತುವ ಸಮಯ, ಅಂತರ, ಕಳೆ ಮತ್ತು ನೀರು ನಿರ್ವಹಣೆ, ಕೀಟ ಮತ್ತು ರೋಗ ನಿರ್ವಹಣೆ, ರಸ ಗೊಬ್ಬರಗಳ ಆಯ್ಕೆ ಬಗ್ಗೆ ಸವಿಸ್ತಾರವಾಗಿ ರೈತರಿಗೆ ಮಾಹಿತಿ ನೀಡಿದರು.
ಯಾದಗಿರಿ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ಡಾ.ರಾಜಕುಮಾರ ಮಾತನಾಡಿ, ರೈತರು ಸಾಂಪ್ರದಾಯಿಕ ಕೃಷಿಯೊಂದಿಗೆ ತೋಟಗಾರಿಕೆ ಬೆಳೆಗಳಿಂದ ಆರ್ಥಿಕವಾಗಿ ಕೃಷಿಯನ್ನು ಲಾಭದಾಯಕ ವಾಗಿಸಿಕೊಳ್ಳಬೇಕು ಅದರಲ್ಲೂ ಕಲ್ಲಂಗಡಿ ಹಣ್ಣಿನ ಬೆಳೆ ಬೆಳೆದಲ್ಲಿ ಹೆಚ್ಚಿನ ಲಾಭ ಮಾಡಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ತೋಟಗಾರಿಕೆ ಬೆಳೆಯಾದ ಕಲ್ಲಂಗಡಿ ಬೆಳೆ ಕುರಿತು ವಿವರ ನೀಡಿದ ಅವರು, ಕಲ್ಲಂಗಡಿ ಬೆಳೆಯ ಸುಧಾರಿತ ಬೇಸಾಯ ಕ್ರಮಗಳು ಸರಳವಾಗಿದ್ದು, ಕಲ್ಲಂಗಡಿ ಬೆಳೆಯಿಂದ ಹೆಚ್ಚು ಲಾಭಮಾಡಿಕೊಳ್ಳಬಹುದು ಎಂದು ವಿವರವಾಗಿ ರೈತರಿಗೆ ಮಾಹಿತಿ ನೀಡಿದರು.
ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರ ಹತ್ತಿಗುಣಿ ತಾಂತ್ರಿಕ ಸಹಾಯಕರಾದ ರವಿಕುಮಾರ ಬಡಿಗೇರ ಇವರು ರೈತ ಸಂಪರ್ಕ ಕೇಂದ್ರದ ವಿವಿಧ ಯೋಜನೆಗಳ ಬಗ್ಗೆ ಹಾಗೂ ಹೆಚ್ಚಾಗಿ ರಸಾಯನಿಕ ಗೊಬ್ಬರ ಬಳಸುವುದರಿಂದ ಪರಿಸರ ಹಾಳಾಗುತ್ತಿದೆ ಎಂದು ರೈತರಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಕಲಿಕೆ ಜೀವನೋಪಾಯ ಕಾರ್ಯಕ್ರಮದ ಹಿರಿಯ ಕಾರ್ಯಕ್ರಮ ಸಂಯೋಜಕರಾದ ಶಾಂತಗೌಡ ಬಿರಾದಾರ ಅವರು ಕಲಿಕೆ ಟಾಟಾ ಟ್ರಸ್ಟ್ಸ್ ಜೀವನೋಪಾಯ ಕಾರ್ಯಕ್ರಮದ ಗುರಿ ಮತ್ತು ಉದ್ದೇಶಗಳ ಕುರಿತು ರೈತರಿಗೆ ತಿಳಿಸಿ ಹೇಳಿದರು.
ಕಾರ್ಯಕ್ರಮ ನಿರೂಪಣೆಯನ್ನು ಹಿರಿಯ ಕಾರ್ಯಕ್ರಮ ಸಂಯೋಜಕರಾದ ಮಂಜುನಾಥ ಅವರು ನೆರವೇರಿಸಿದರು. ಮತ್ತು ಈ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ಅನುರಾಧ, ಸುಧಾರಾಣಿ , ಸಂಪತ ಕುಮಾರ,ಅರುಣ ಕುಮಾರ, ಮತ್ತು ಗ್ರಾಮ ಸಂಪನ್ಮೂಲ ವ್ಯಕ್ತಿಗಳಾದ ಅಬ್ದುಲ್, ಭೀಮಶಂನರಾವ, ನಾಗಪ್ಪ, ಸಾಬರೆಡ್ಡಿ, ಪ್ರಕಾಶ, ಮತ್ತು ಈ ಕಾರ್ಯಕ್ರಮದಲ್ಲಿ ಸುಮಾರು 100 ಕ್ಕೂ ಹೆಚ್ಚು ಜನ ರೈತರು ವಿವಿಧ ಗ್ರಾಮಗಳಿಂದ ಆಗಮಿಸಿ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ