ಕೇಂದ್ರ ಪುರಸ್ಕೃತ ಯೋಜನೆಗಳು ಜನತೆಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಹಿರಿದು: ಯಾದಗಿರಿ ಟೈಮ್ಸ್ ವಾರ್ತೆ 29-08-2025 ಯಾದಗಿರಿ: ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಹಳ್ಳಿ ಹಳ್ಳಿಗೆ ಮುಟ್ಟಿಸುವಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರದ ವಾರ್ತಾ ಶಾಖೆ ಹಮ್ಮಿಕೊಂಡಿರುವ ವಾರ್ತಾಲಾಪ ಕಾರ್ಯಾಗಾರವು ಬಹಳ ಅನುಕೂಲಕರವಾಗಲಿದೆ. ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೆಚ್ಚು ಪ್ರಚುರಪಡಿಸುವುದರಿಂದ ಎಲ್ಲ ಫಲಾನುಭವಿಗಳಿಗೂ ಸರ್ಕಾರದ ಯೋಜನೆಗಳು ತಲುಪಲಿವೆ ಎಂದು ಶಾಸಕರಾದ ಚನ್ನಾರೆಡ್ಡಿ ಅಭಿಪ್ರಾಯಪಟ್ಟರು. ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ)., ಕರ್ನಾಟಕ ಕಾರ್ಯನಿರತ ಪತ್ರಿಕೆಗಳ ಸಂಪಾದಕರ ಸಂಘ (ರಿ). ಜಿಲ್ಲಾ ಘಟಕ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಎಸ್ ಡಿ ಎನ್ ಹೋಟೆಲ್ ನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಆಯೋಜಿಸಿದ್ದ “ವಾರ್ತಾಲಾಪ” ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, ಪತ್ರಕರ್ತರಿಗೆ ಈ ಕಾರ್ಯಾಗಾರ ಆಯೋಜಿಸಿರುವುದು ಬಹಳ ಸಂತೋಷದ ಸಂಗತಿ. ಇದರಿಂದ ಸರ್ಕಾರದ ಜನಪರ ಯೋಜನೆಗಳಿಗೆ ಹೆಚ್ಚಿನ ಮಾಹಿತಿ ಜನತೆಗೆ ಸಿಕ್ಕು ಅನುಕೂಲವಾಗಲಿದೆ ಎಂದರು. ಭಾರತ ಸರ್ಕಾರದ ವಾರ್ತಾ ಶಾಖೆಯ, ಬ...